Friday, October 12, 2012

ನಾಕು ತಂತಿ

Haadu - Naaku Tanti
Rachane - Da Ra Bendre
Raaga Samyojane - Mysore Ananthaswamy
Haadiruvavaru - Mysore Ananthaswamy

 http://www.kannadaaudio.com/Songs/Bhaavageethe/Naakutanti-DaRa-Bendre/Naaku.ram

ಒಂದು

ಆವು ಈವಿನ ನಾವು ನೀವಿಗೆ
ಆನು ತಾನದ ತನನನಾS
ನಾನು ನೀನಿನ ಈ ನಿನಾನಿಗೆ
ಬೇನೆ ಏನೋ? ಜಾಣಿ ನಾS
ಚಾರು ತಂತ್ರಿಯ ಚರಣ ಚರಣದ
ಘನಘನಿತ ಚತು- -ರಸ್ವನಾ
ಹತವೊ ಹಿತವೋ ಆ ಅನಾಹತಾ
ಮಿತಿಮಿತಿಗೆ ಇತಿ ನನನನಾ
ಬೆನ್ನಿನಾನಿಕೆ ಜನನ ಜಾನಿಕೆ
ಮನನವೇ ಸಹಿ-ತಸ್ತನಾ.

ಎರಡು*

ಗೋವಿನ ಕೊಡುಗೆಯ ಹಡಗದ ಹುಡುಗಿ ಬೆಡಗಿಲೆ ಬಂದಳು ನಡುನಡುಗಿ;
ಸಲಿಗೆಯ ಸುಲಿಗೆಯ ಬಯಕೆಯ ಒಲುಮೆ ಬಯಲಿನ ನೆಯ್ಗೆಯ ಸಿರಿಯುಡುಗಿ;
ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ;
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ;
ಬೆಚ್ಚಿದ ವೆಚ್ಚವು ಬಸರಿನ ಮೊಳಕೆ ಬಚ್ಚಿದ್ದಾವುದೋ ನಾ ತಿಳಿಯೆ.
ಭೂತದ ಭಾವ ಉದ್ಭವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ.

ಮೂರು

'ಚಿತ್ತೀಮಳಿ, ತತ್ತೀ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತಿSಯೊ ಮಗನS ಅಂತ ಕೂಗಿದರು
ಸಾವೀ ಮಗಳು, ಭಾವೀ ಮಗಳು ಕೂಡಿ'
'ಈ ಜಗ, ಅಪ್ಪಾ, ಅಮ್ಮನ ಮಗ ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ
ಶ್ರೀ ಗುರುದತ್ತ ಅಂದ.'
ನಾಕು

 
'ನಾನು' 'ನೀನು' 'ಆನು' 'ತಾನು' ನಾಕೆ ನಾಕು ತಂತಿ,
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ!
ಗಣನಾಯಕ ಮೈ ಮಾಯಕ ಸೈ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ